ಮುಂಬೈ : ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರಕ್ಕೆ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಮಲಾಡ್ ನ ಕುರಾರ್ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ಗೋಡೆ ಕುಸಿದ ಪರಿಣಾಮ 16 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವಾರು ಮಂದಿ ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು