ಬೆಂಗಳೂರು : ವಾಟರ್ ಹೀಟರ್ನಿಂದಾಗಿ ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಜ್ಯೋತಿ ಹಾಗೂ ಆಕೆಯ 4 ವರ್ಷದ ಮಗು ಜಯಾನಂದ್ ವಿದ್ಯುತ್ ಶಾಕ್ನಿಂದ ಮೃತಪಟ್ಟವರು. ರಾಯಚೂರು ಮೂಲದ ಜ್ಯೋತಿ ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದರು.ಆಕೆ ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಭಾನುವಾರ ಮಧ್ಯಾಹ್ನ