ಮದ್ಯಪಾನಕ್ಕೆ ದಾಸನಾಗಿದ್ದ ಪತಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಗಂಡನ ಟಾರ್ಚರ್ ತಾಳಲಾರದೆ ಹೆಂಡ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ, ಮಗಳು ಮಾನಸ, ಮಗ ಮದನ್ ಮೃತಪಟ್ಟಿದ್ದಾರೆ. ಕಳೆದ 8 ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾಳನ್ನು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆಯಾಗಿದ್ದು, ಪತ್ನಿ