ಮೈಸೂರು : ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು. ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ