H3N2 ವೈರಸ್ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ಎಚ್3ಎನ್2 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇನ್ಫ್ಲುಯೆಂಜಗೆ