ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರು ಯಾರು ಸ್ಪರ್ಧೆ ಮಾಡಲಿದ್ದಾರೆ. ಆಕಾಂಕ್ಷಿಗಳು ಯಾರು ಯಾರು ಅಂತ ಹೆಸರುಗಳನ್ನು ಸಚಿವೆ ಜಯಮಾಲಾ ಬಹಿರಂಗಪಡಿಸಿದ್ದಾರೆ.ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ನಾಲ್ವರು ಆಕಾಂಕ್ಷಿಗಳ ಹೆಸರುಗಳನ್ನು ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಉಡುಪಿಯಲ್ಲಿ ಬಹಿರಂಗಪಡಿಸಿದ್ದಾರೆ.ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಬಳಿಕ ಸಚಿವೆ ಜಯಮಾಲಾ, ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ್ರು. ಲೋಕಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಮಾಜಿ ಸಚಿವರಾದ ವಿನಯ