ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ಹೊಂದಾಣಿಕೆ ಅಗತ್ಯವಿದೆ. ಹೀಗಾಗಿ ಈಗಾಗಲೆ ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟ್ ಹೊಂದಾಣಿಕೆ ತೀರ್ಮಾನವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ ಹೊಂದಾಣಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸೀಟ್ ಹಂಚಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಎಷ್ಟು ಸೀಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕೆಂಬುದು ತೀರ್ಮಾನವಾಗಿಲ್ಲ. ಜೆಡಿಎಸ್ ಜೊತೆ ಸೀಟ್ ಹಂಚಿಕೆಯಿಂದ ಲಾಭ-ನಷ್ಟ ಎರಡು ಆಗುತ್ತದೆ. ಆದ್ರೂ ಕಾಂಗ್ರೆಸ್ ಹೊಂದಾಣಿಕೆಯಿಂದ