ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಯಾಕೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಗೊತ್ತಿಲ್ಲ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ. ಒಂದು ವೇಳೆ ಅವರು ಒಪ್ಪದಿದ್ದರೆ ನಾನು ಕೂಡ ಅವರ ಹಾದಿಯನ್ನೇ ತುಳಿಯುತ್ತೇನೆ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಸ್.ಎಂ.ಕೃಷ್ಣ ಅವರ ಅತೀ ಸಮೀಪದ ವ್ಯಕ್ತಿ. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು