ಚಲನಚಿತ್ರ ನಟ ಪ್ರಕಾಶ್ ರಾಜ್ ವಿರುದ್ಧ ಟ್ಟಿಟರ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಮೈಸೂರು–ಕೊಡಗು ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಶುಕ್ರವಾರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದ ಪ್ರತಾಪ್ ಸಿಂಹ ಅವರನ್ನು ನ್ಯಾಯಾಲಯ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಕಳೆದ ಬಾರಿಯ ವಿಚಾರಣೆಗೆ ಪ್ರತಾಪ ಸಿಂಹ ಹಾಗೂ ಅವರ ವಕೀಲರು ಗೈರು ಹಾಜರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೋರ್ಟ್, ಆರೋಪಿಯನ್ನು