ಬೆಂಗಳೂರು: ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಿಡಿ ಕಾರುವ ಬಹುಭಾಷಾ ನಟ ಪ್ರಕಾಶ್ ರೈ ಬಗ್ಗೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈಯದ್ದು ಉಗುಳಿ ಓಡುವ ಜಾಯಮಾನ ಎಂದು ಅವರು ಲೇವಡಿ ಮಾಡಿದ್ದಾರೆ.ಅವರಂತೆ ಮಾತನಾಡಲು ನಮಗೆ ಬರುವುದಿಲ್ಲ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಗೌರಿ ಲಂಕೇಶ್ ಹತ್ಯೆ, ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿ ತಾನೊಬ್ಬ ಬಹುದೊಡ್ಡ ನಟ ಎಂದು ಪ್ರಕಾಶ್ ಸಾಬೀತು ಪಡಿಸಿದ್ದಾರೆ ಎಂದು ಪ್ರತಾಪ್ ಸಿಂಹ