ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನವಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ನೀವು ಒಬ್ಬ ನಟ ಎನ್ನುವ ವಿವೇಚನೆ ನಿಮಗಿರಲಿ. ಗೌರಿ ಹತ್ಯೆ ತನಿಖೆ ನಡೆಸುವುದು ರಾಜ್ಯದ ಕಾಂಗ್ರೆಸ್ ಸರ್ಕಾರ. ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಬಿಟ್ಟು, ಸಂಘ ಪರಿವಾರ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯನ್ನು ಈ ವಿಚಾರದಲ್ಲಿ ಎಳೆದು ತಂದರೆ