ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಡರಾತ್ರಿ ಕಾರ್ಯಾಚರಣೆ ನಡೆಸಿ ತಮ್ಮ ಸ್ವಕ್ಷೇತ್ರದಲ್ಲಿ 20 ಜನರ ಪ್ರಾಣ ಉಳಿಸಿ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಸ್ವಕ್ಷೇತ್ರ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದ ರೇಣುಕಾಚಾರ್ಯಗೆ ಆಸ್ಪತ್ರೆಯಲ್ಲಿ ಇನ್ನು ಮೂರು ಗಂಟೆಗಳಿಗೆ ಆಗುವಷ್ಟು ಮಾತ್ರ ಆಕ್ಸಿಜನ್ ಉಳಿದಿದೆ ಎಂಬ ವಿಚಾರ ಗೊತ್ತಾಗುತ್ತದೆ.ತಕ್ಷಣವೇ ಕಾರ್ಯಪ್ರವೃತ್ತರಾಗುವ ಅವರು ತಮ್ಮ ವಾಹನದಲ್ಲೇ ತೆರಳಿ ರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಅಗತ್ಯವಾದ ಆಕ್ಸಿಜನ್ ತರಿಸಿಕೊಟ್ಟು 20