ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಸಿಗುತ್ತೆ. ಹೀಗಾಗೆ ಈಶ್ವರಪ್ಪನವರೇ ದಯವಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ಸಂಸದ ಶ್ರೀರಾಮಲು ಬಿಎಸ್ವೈ ಪರ ಬ್ಯಾಟಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದರೇ ರಾಜ್ಯ ಬಿಜೆಪಿ ಘಟಕದಲ್ಲಿ ಸಮಸ್ಯೆಯಾಗುತ್ತದೆ. ಮುಂಬರುವ ವಿಧಾನಸಭೆ ಚುಣಾವಣೆ ಎದುರಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಸ್ಥಾಪಿಸಬೇಕಾದರೆ ನಾವೆಲ್ಲರೂ ಸೇರಿ ಬಿಎಸ್ವೈ ಅವರಿಗೆ ಬೆಂಬಲ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.