ಬೆಂಗಳೂರು : ಹೊಸಕೋಟೆ ಉಪಚುನಾವಣೆ ಮುಗಿದಿದ್ದು ಇನ್ನೇನು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಇದೀಗ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಸಿಎಂ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಎಂಟಿಬಿ ನಾಗರಾಜ್ ಉಪಚುನಾವಣೆಯ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ವೇಳೆ ಸಂಸದ ಬಚ್ಚೇಗೌಡರು ಬಿಜೆಪಿ ಸಂಸದರಾಗಿ ಬಿಜೆಪಿ ಅಭ್ಯರ್ಥಿಯಾದ ನನಗೆ