ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವನ್ನಪ್ಪಲು ಭೈರತಿ ಸುರೇಶ್ ಕಾರಣ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಅವನು ಬಚ್ಚಾ, ಆತನ ಬಂಡವಾಳ ನನಗೆ ಗೊತ್ತು. ರಾಕೇಶ್ ಸಿದ್ದರಾಮಯ್ಯನನ್ನು ಹಾಳು ಮಾಡಿದ್ದೇ ಭೈರತಿ ಸುರೇಶ್. ಇನ್ನೂ ನೂರು ವರ್ಷ ಬದುಕಿ ಬಾಳಬೇಕಿದ್ದವನನ್ನು ಸಾಯಿಸಿದ್ದು ನನಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೊರಿಸಿರುವ ಆರೋಪ