ಬೆಂಗಳೂರು : ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಕ್ರಮ ಜರುಗಿಸುವಂತೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಆಗ್ರಹಿಸಿದ್ದಾರೆ.ಇಂದು ಬೆಂಗಳೂರಿನ ಸಿಎಂ ನಿವಾಸಕ್ಕೆ ತೆರಳಿ ಸಿಎಂ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಬಿಎಸ್ ವೈ ಗೆ ಒತ್ತಾಯಿಸುತ್ತಿದ್ದೇನೆ. ಚುನಾವಣೆ ಮುಗಿದ ದಿನದಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಆದ್ರೆ ಅವರ ವಿರುದ್ಧ ಸಿಎಂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.