ಬಹುನಿರೀಕ್ಷಿತ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಂತಿದೆ. ಪಕ್ಷದ ಹೈಕಮಾಂಡ್ ಭೇಟಿಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸೆ. 17ಕ್ಕೆ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಇನ್ನಿತರ ಪ್ರಮುಖ ವಿಷಯಗಳನ್ನು ಪಕ್ಷದ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳಾದ ಮೂವರು ಎಂಎಲ್ ಸಿ ಗಳು ಹಾಗೂ ಮೂಲ ಬಿಜೆಪಿಯ ಇಬ್ಬರ ಹೆಸರು ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ ಎನ್ನಲಾಗುತ್ತಿದೆ.