1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ವಾರಣಾಸಿಯ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆ ನ್ಯಾಯಾಲಯ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಅನ್ಸಾರಿ ದೋಷಿ ಎಂದು ತೀರ್ಪು ನೀಡಿತ್ತು. ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು.