ರಾಜ್ಯದಲ್ಲಿರುವ ಮೂರು ರಾಜಕೀಯ ಪಕ್ಷಗಳಲ್ಲಿ ಪ್ರಮಾಣಿಕರೇ ಅಸ್ಪೃಶ್ಯರು ಎಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಆಪ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ ಎಂದರು. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು