ಕಾಂಗ್ರೆಸ್ ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಚಂದ್ರು ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸದೇ ಕಡೆಗಣಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದೇಶದಲ್ಲೆ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ