ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಹುಮನಿ ಸುಲ್ತಾನ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಯಾರು, ಬಹುಮನಿ ಸುಲ್ತಾನ್ ಬಗ್ಗೆ ನನಗೆ ಗೊತ್ತಿಲ್ಲ. ಆ ಕಾಲದಲ್ಲಿ ನಾನು, ನೀವು ಯಾರು ಹುಟ್ಟಿರಲಿಲ್ಲ. ಯಾವನು ಏನು ಚರಿತ್ರೆ ಬರೆದನೋ ಗೊತ್ತಿಲ್ಲ. ಚರಿತ್ರೆ ಬರೆದವರು ಅವರ ಆಲೋಚನೆ ಮತ್ತು ಮಾನಸಿಕ ಸ್ಥಿತಿಗೆ ಅನುಗುಣವಾಗಿ