ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ. ಸುಮಾರು 400 ಅಡಿ ಆಳದ ಕೊಳವೆ ಬಾವಿಗೆ ಮೃತದೇಹವನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿದೆ. ಕೊಳವೆಬಾವಿಯ 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿದ್ದು, 30 ಅಡಿ ಆಳದಲ್ಲಿ ತಲೆಯ 2 ಭಾಗ, ಕೈ, ಕಾಲು, ತೊಡೆ, ಹೊಟ್ಟೆ ಸೇರಿದಂತೆ