ತುಮಕೂರು : ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೋಕ್ಸೋ ಕಾಯಿದೆ ಅಡಿ ತುಮಕೂರು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿದ್ದ ಭೂಪನೊಬ್ಬ, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ತೆಗೆದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಕುಟುಂಬ ಸಮೇತ ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ಇದೀಗ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು