ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಬೀಳಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ವಿನಯ್ ಕುಲಕರ್ಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಹರ್ಷೋದ್ಘಾರ, ಬೆಂಬಲದೊಂದಿಗೆ