ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ, ಕೊಲೆಯಾಗಿದ್ದು ಗಂಡನ ಸಾವಿಗೆ ಕಾರಣವಾದ ಈಶ್ವರಪ್ಪನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಬೆಳಗಾವಿಯಲ್ಲಿ ಮೃತ ಸಂತೋಷ ಪತ್ನಿ ಜಯಶ್ರೀ ಪಾಟೀಲ್ ಕಿಡಿಕಾರಿದ್ದಾರೆ. ಈಶ್ವರಪ್ಪ ಕೇಳಿರುವ ಕಮಿಷನ್ ಬಗ್ಗೆ ನನ್ನ ಮುಂದೆ ಹೇಳಿಕೊಂಡಿದ್ದರು. 4 ಕೋಟಿ ಕಾಮಗಾರಿ ಮಾಡಿದ್ದೇನೆ. ಈಶ್ವರಪ್ಪ 40% ಕಮಿಷನ್ ಕೇಳುತ್ತಿದ್ದಾರೆ. 40% ಕಮಿಷನ್ ಕೊಟ್ಟರೆ ನಾನು ಸಂಪೂರ್ಣ ಹಾಳಾಗುತ್ತೇನೆ ಎನ್ನುತ್ತಿದ್ದರು. ಮೈಮೇಲೆ ಇದ್ದ ಬಂಗಾರ ಅಡವಿಟ್ಟು 108 ಕಾಮಗಾರಿ ಮಾಡಿಸಿದರು. ಬಿಲ್