ಚಿಕ್ಕಮಗಳೂರು : ನಿನ್ನೆ ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಕ್ಕೆ ಪ್ರವಾಸ ಕೈಗೊಂಡು ಸರಣಿ ಪ್ರತಿಭಟನೆ ಎದುರಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.