ಬೆಂಗಳೂರು: ಕಾಂಗ್ರೆಸ್ ಪ್ರಮುಖ ಸಚಿವರ ಟೆಲಿಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮೊದಲೇ ಹೇಳಿದ್ದೆ. ನನ್ನ ಟೆಲಿಫೋನ್ ಕದ್ದಾಲಿಕೆ ಮಾಡುತ್ತಿಲ್ಲ. ಮಾಡಿದರೂ ಏನು ಪ್ರಯೋಜನವಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಲಿಫೋನ್ ಟ್ಯಾಪ್ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ಸಾಕ್ಷ್ಯಾಧಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ದೂರು ನೀಡಿಲ್ಲ. ಲಿಂಗಾಯಿತ ವೀರಶೈವ ವಿವಾದದ ಕಾರಣ ಎಂ.ಬಿ.ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಲಿಂಗಾಯಿತ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಇದು ಬಿಜೆಪಿಗೆ