ಜಿಲ್ಲಾ ಪದಾಧಿಕಾರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟವಾಗಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ರದ್ದುಗೊಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದು, ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಭಿನ್ನಮತ ಸ್ಫೋಟವಾಗಿದೆ. ಜಿಲ್ಲಾ ಪದಾಧಿಕಾರಿಗಳ ನೇಮಕ ಕುರಿತು ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಿ ಎಂದು ಕಾರ್ಯಕರ್ತರು