ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಅಘೋಷಿಸಿತ ಹೈಅಲರ್ಟ್ ಜಾರಿಯಲ್ಲಿದೆ. ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಮರದ ಪೋಲ್ ಗಳ ಮೂಲಕ ನಗರದ 100 ಅಡಿ ರಸ್ತೆ, ಏರ್ ಪೋರ್ಟ್ ರಸ್ತೆ, ಅರಮನೆ ಮುಂಭಾಗ, ಚಾಮುಂಡಿ ಬೆಟ್ಟದ ರಸ್ತೆಗಳಲ್ಲಿ ಸುಮಾರು 30 ಕಿ.ಮೀ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ.