ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ಈ ವರ್ಷ ಮೈಸೂರು ದಸರಾ ಮತ್ತಷ್ಟು ಕಳೆ ಕಟ್ಟಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಬಣ್ಣದ ರೇಷ್ಮೆ ಸೀರೆ ಜೊತೆ ಫಲ ತಾಂಬೂಲ ಸಮರ್ಪಸಿ ಹರಕೆ ಸಲ್ಲಿಸಿದ್ದಾರೆ. ಇದೇ ವೇಳೆ ಈ ಬಾರಿಯ ದಸರಾ ಉದ್ಘಾಟಕರನ್ನು ಘೋಷಿಸಿದ್ದು, ನಾಡಿನ ಹೆಸರಾಂತ ಸಂಗೀತ ನಿರ್ದೇಶಕ ಹಂಸಲೇಖ