ಸೇನಾ ವಾಹನಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತರು ನಿಗೂಢವಾಗಿ ಸಾವಿಗೀಡಾಗಿದ್ದು, ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಎರಡು ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ್ದ ಹಠಾತ್ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.ಇದರ ಬೆನ್ನಲ್ಲೇ ಮೂವರು ಶಂಕಿತರನ್ನು ವಿಚಾರಣೆಗಾಗಿ ಸೇನೆ ವಶಕ್ಕೆ ಪಡೆದಿತ್ತು. ಶುಕ್ರವಾರ ಈ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾದ