ಬೆಂಗಳೂರು, ಅ.18 : ಮಂಡ್ಯ ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಮೂರು ತಿಂಗಳಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನೌಧದಲ್ಲಿಂದು ಮಂಡ್ಯಮೈಷುಗರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಗಳು, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಸಿಎಂ ಈ ವಿಷಯ ತಿಳಿಸಿದರು. ಕಾರ್ಖಾನೆಯ ದಕ್ಷ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.