ಮಂಗಳೂರು : ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು.ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ