ಬೆಂಗಳೂರು : ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ನಮ್ಮ ನಾಯಕರು