ದಾವಣಗೆರೆಯಲ್ಲಿ ಮಾರ್ಚ್ 25ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೆಗಾ ರ್ಯಾಲಿ ನಡೆಯಲಿದೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಜೊತೆಗೆ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು. ಇದೇ ತಿಂಗಳಲ್ಲಿ ದಾವಣಗೆರೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಮೆಗಾ ರ್ಯಾಲಿ