ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೇರವೇರಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೋಷಿತರು ಮತ್ತು ಹಿಂದುಳಿದವರ ಶ್ರೇಯೋಭಿವೃದ್ಧಿಗೆ ನಾರಾಯಣ ಗುರುಗಳ ಹೋರಾಟ ಅವಿರಸ್ಮರಣೀಯವಾದದ್ದು. ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿ ಅವರು ಸಮಾಜದ