ಕುಂದಾನಗರಿಯಲ್ಲಿ ಬೀದಿಗೆ ಇಳಿದ ಜನರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಡಿಮಿಡಿಗೊಂಡರು. ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ಕಾಯ್ದೆ ತಿದ್ದುಪಡಿಗೆ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು ರಾಜ್ಯದಲ್ಲೂ ಕೇಂದ್ರದ ನೀತಿ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ಬೆಳಗಾವಿಯಲ್ಲೂ ಕೂಡ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಿಲ್ಲಾ ಕೋಟೆ ಕೆರೆಯಿಂದ ಪ್ರಾರಂಭವಾದ