ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 19ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ನರೇಂದ್ರ ಮೋದಿ ಅವರ ಭೇಟಿಯ ಸಿದ್ಧತೆ ಕಾರ್ಯಗಳು ನಡೆದಿವೆ. ಹಾಸನದ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ನರೇಂದ್ರ ಮೋದಿ ಭೇಟಿಯ ಕಾರಣಕ್ಕೆ ಶ್ರವಣಬೆಳಗೊಳಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಎನ್ಎಸ್ ಜಿ ತಂಡ ಪರಿಶೀಲನೆ ನಡೆಸಿದ್ದು, ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್