ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ