ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಎಲ್ಲ ಭಾಗಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಮೈಸೂರು, ದಾವಣಗೆರೆ ಹಾಗೂ ಕಲಬುರ್ಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ರಾಜ್ಯ ಘಟಕಕ್ಕೆ ದೆಹಲಿಯಿಂದ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಹೇಗಾದರೂ ಮಾಡಲು ರಾಜ್ಯದಲ್ಲಿ