ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ, ಹವಾ ಕುಸಿಯುತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಹಾಗೂ ವಿವಿಧ ರಾಜ್ಯಗಳಲ್ಲಿನ ಉಪಚುನಾವಣಾ ಫಲಿತಾಂಶವು ಕುಸಿಯುತ್ತಿರುವ ಪ್ರಧಾನಿ ಮೋದಿ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಹೀಗಂತ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ. ಪ್ರಧಾನಿ ಮೋದಿ ಹಾಗೂ ಅಮಿತ ಶಾ ಜೋಡಿಯು ಹಲವಾರು ಸಮಾವೇಶಗಳನ್ನು ಮಾಡಿ ಇಲ್ಲ-ಸಲ್ಲದ ಆಶ್ವಾಸನೆಗಳನ್ನು