ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ನಮ್ಮ ದೇಶದ ಬೆಳವಣಿಗೆಯಸ್ವರೂಪವೇ ಬದಲಾಗಲಿದ್ದು, ವಿನಾಕಾರಣ ಈ ನೀತಿಯ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಗುರುವಾರದಂದು ಬಿಜೆಪಿ ಹಮ್ಮಿಕೊಂಡಿದ್ದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಿಮಿತ್ತ ನಡೆದ ಬುದ್ಧಿಜೀವಿಗಳು ಮತ್ತು ವಿವಿಧ ಕ್ಷೇತ್ರಗಳ ವೃತ್ತಿಪರರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ನೀತಿ ರಚನೆಯ ಹಿಂದೆ ಅನೇಕ ಶ್ರೇಷ್ಠ ಮಿದುಳುಗಳು ಕೆಲಸ ಮಾಡಿವೆ. ಕನ್ನಡಿಗರೇ