ಸುಡುಬಿಸಿಲಲ್ಲೂ ಬೀಸಿ ಬರುವ ತಂಗಾಳಿ. ಮಂಜಿನ ಜೊತೆಗೆ ತುಂತುರು ಮಳೆ, ದೇಗುಲದಿಂದ ಕೇಳಿ ಬರುವ ಗಂಟೆಯ ನಿನಾದ. ಮಂಜುಮುಸುಕಿನ ಆಹ್ಲಾದಕರ ವಾತಾವರಣ.ಹೀಗೆ ಸದಾ ಪ್ರವಾಸಿಗರಿಗೆ ಉಲ್ಲಾಸ ತುಂಬುತ್ತಾ ತನ್ನತ್ತ ಕೈಬೀಸಿ ಕರೆಯುವ ತಾಣ, ಈ ವರ್ಷದ ಎಲ್ಲಾದಿನದಲ್ಲೂ ಹಿಮದಿಂದ ಆವರಿಸಿರುವ ಬೆಟ್ಟ , ತುಂತುರು ಮಳೆ ,ಈ ಮಳೆಯ ನಡುವೆಯೂ ಅಲ್ಲಲ್ಲಿ ನಿಂತು ಪ್ರಕೃತಿ ಸೌಂದರ್ಯ ಸವಿಯುತ್ತಿರುವ ಪ್ರವಾಸಿಗರು.ಈ ಅದ್ಬುತ ಪ್ರಕೃತಿ ಮನೋಹರ ಸೌಂದರ್ಯ ಕ್ಷಣಗಳಿಗೆ ಸಾಕ್ಷಿಯಾಗಿದ್ದು,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಹಿಮಮತ್ ಗೋಪಾಲಸ್ವಾಮಿ ಬೆಟ್ಟ.ಸಮುದ್ರಮಟ್ಟದಿಂದ ಸುಮಾರು 1454 ಮೀ. ಎತ್ತರದಲ್ಲಿರುವ ಪಶ್ಚಿಮ ಘಟ್ಟಗಳ ಸಾಲಿಗೆ ಸೇರಿದ ತನ್ನ ಅನುಪಮ ಸೌಂದರ್ಯದಿಂದ, ತನ್ನದೆ ಆದ ಪ್ರತ್ಯೇಕ ಸಾಲಿನಲ್ಲಿ ನಿಲ್ಲುವ ಕರ್ನಾಟಕದ ಅತ್ಯಂತ ಹೆಮ್ಮೆಯ ತಾನ ಹಿಮವದ್ ಗೋಪಾಲಸ್ವಾಮಿ ಬೆಟ್ಟ.ಹಿಮದಿಂದ ಆವೃತ್ತವಾಗುತ್ತಾ ರವಿಕಿರಣದಲ್ಲಿ ತನ್ನ ಸ್ನಿಗ್ಧ ಸೌಂದರ್ಯ ಚಾಚಿಕೊಂಡು ವರ್ಷದ ಎಲ್ಲಾ ಕಾಲದಲ್ಲೂ ತಂಪಾದ ಹವಾಗುಣವಿರುವ ಈ ಪ್ರದೇಶದಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಸದಾ ಮಂಜುಮುಸುಕಿದ ವಾತಾವರಣ. ಚಾರಣ ಪ್ರಿಯರಿಗೆ ಹುರುಪಿನ ತಾಣವಾಗಿಯೂ, ನಿಸರ್ಗ ಪ್ರೇಮಿಗಳಿಗೆ ಮುದ ನೀಡುವ, ಭಕ್ತರಿಗೆ ಇಷ್ಟಾರ್ಥ ನೆರವೇರಿಸುವ ಕ್ಷೇತ್ರವಾಗಿಯೂ ಗೋಪಾಲಸ್ವಾಮಿ ಗಮನಸೆಳೆಯುತ್ತಿದೆ. ಮಂಜಿನ ಜೊತೆಗೆ ಮಳೆಯ ತುಂತುರು ಹನಿಗಳು, ದೇವಾಲಯದ ಗರ್ಭಗುಡಿಯ ಬಾಗಿಲಿನ ಮೇಲ್ಭಾ