ಬಹು ನಿರೀಕ್ಷಿತ, ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ. ತುಂಗಭದ್ರಾ ಜಲಾಶಯದಲ್ಲಿ ಬಹಳಷ್ಟು ಹೂಳು ತುಂಬಿರುವ ಕಾರಣ ಉಂಟಾಗಿದ್ದ ನೀರು ಸಂಗ್ರಹಣೆಯ ಸಾಮರ್ಥ್ಯ ಸಮಸ್ಯೆಯನ್ನು ನೀಗಿಸಲು ಪರ್ಯಾಯ ಜಲಾಶಯ ನಿರ್ಮಾಣ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ.ಪ್ರಸ್ತುತ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ 130 TMC ಇದ್ದರೂ 31.616 TMC