ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಬಳಿ ನಕ್ಸಲರ ಹೆಜ್ಜೆ ಗುರುತು ಮೂಡಿದೆ. ಮೂವರು ಶಸ್ತ್ರಾಸ್ತ್ರಧಾರಿಗಳು ಸಂಶಯಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ನಕ್ಸಲ್ ನಿಗ್ರಹ ಪಡೆಗೆ ಮಾಹಿತಿ ನೀಡಿದ್ದಾರೆ. ಶಿರಾಡಿ ಗ್ರಾಮದ ಬಳಿ ಶಂಕಿತರು ಕಂಡುಬಂದಿದ್ದಾರೆ ಎನ್ನಲಾಗಿದೆ. ಇವರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರ, ಮೊಬೈಲ್, ಲ್ಯಾಪ್ ಟಾಪ್ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಪ್ರಾರಂಭಿಸಿದ್ದು, ಶಂಕಿತರಿಗಾಗಿ ತೀವ್ರ ಹುಡುಕಾಟ