ಮಂಗಳೂರು: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಸರ್ಕಾರ ನಮ್ಮದು. ಒಳ್ಳೆಯ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಹೆಜ್ಜೆ ಇಡುತ್ತಿದ್ದಾರೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಪಾಧನೆ ಮಾಡುತ್ತಿದ್ದಾರೆ ಎಂದರು.ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಮಂಗಳೂರಿಗನ್ನು ಪ್ರಶ್ನೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.