ಬೆಂಗಳೂರು : ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್ಇಪಿ ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎನ್ಇಪಿ ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ ಎನ್ಇಪಿ ರದ್ದು ಮಾಡುತ್ತೇವೆ ಎಂದರು.ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎನ್ಇಪಿ ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ.