ಶಾಂತಗೊಂಡಿದ್ದ ನೇತ್ರಾವತಿ- ಕುಮಾರಧಾರ ನದಿಗಳು ಇಂದು ಮತ್ತೆ ರೌದ್ರವತಾರ ತಾಳಿವೆ. ಭಾನುವಾರ ನಸುಕಿನ ಜಾವದಿಂದಲೇ ಎರಡೂ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಅಪಾಯದ ಮಟ್ಟ ತಲುಪಿದೆ. ಈಗಾಗಲೇ ನದಿ ಪಾತ್ರದ ಪ್ರದೇಶಗಳು ಜಲಾವೃತಗೊಂಡಿವೆ. ಉಭಯ ನದಿಗಳಲ್ಲಿ ನೀರು ಹೆಚ್ಚಳವಾಗುತ್ತಲೇ ಇದ್ದು 2019ರ ಬಳಿಕ ಮತ್ತೊಮ್ಮೆ ನೆರೆ ಬರುವ ಸಾಧ್ಯತೆ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ನೆರೆ ಭೀತಿ ಮೂಡಿಸಿದ ನೇತ್ರಾವತಿ- ಕುಮಾರಧಾರ ನದಿಗಳು ಶನಿವಾರ ಶಾಂತಗೊಂಡಿದ್ದವು. ಉಭಯ