ಮಂಗಳೂರು : ನವ ಭಾರತ ನಿರ್ಮಾಣದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಾತ್ರ ನಿರ್ಣಾಯಕವಾಗಿರುತ್ತದೆ.ಈ ನೀತಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತತೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ