ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು. ಬದಲಾವಣೆ ಮಾಡಬೇಕೆಂದು ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ಕೇಳಿದ್ದೆ. ಕೇಳಿದ ಖಾತೆ ಕೊಡದೇ ಇದ್ದರೆ ಶಾಸಕನಾಗಿ ಉಳಿಯೋದೇ ಒಳಿತು ಎನ್ನುವದು ನನ್ನ ನಿಲುವು ಎಂದರು. ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ನೀಡಿದ್ದು ನಾನು. ಇದು ಎಲ್ಲರಿಗೂ ಗೊತ್ತಿರುವ